ADVERTISEMENT

ಜೆಡಿಎಸ್‌ಗೆ ರಮೇಶ್‌ ಬಾಬು ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 9:35 IST
Last Updated 7 ಮಾರ್ಚ್ 2020, 9:35 IST
   

ದಾವಣಗೆರೆ:‘ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರಿಗೆ ನನ್ನ ರಾಜೀನಾಮೆ ಪತ್ರವನ್ನುಮಾರ್ಚ್‌ 6ರಂದು ನೀಡಿದ್ದೇನೆ. ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ವಾಪಸ್ ಹೋಗುವುದಿಲ್ಲ’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ರಮೇಶ್ ಬಾಬು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.‌

‘ಜೆಡಿಎಸ್ ರಾಜಕೀಯ ಪಕ್ಷದ ಗುಣಗಳನ್ನು ಕಳೆದುಕೊಳ್ಳುತ್ತಿದೆ. ಮುಕ್ತ ವಾತಾವರಣ ಇಲ್ಲ. ಅಲ್ಲದೇ ನಿಷ್ಠಾವಂತ ಕಾರ್ಯಕರ್ತರಿಗೆಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಹೀಗಾಗಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಈ ವೇಳೆ ಪಕ್ಷದ ವಿರುದ್ಧ ಆರೋಪ ಮಾಡುವುದಿಲ್ಲ. ಏಕೆಂದರೆ ನನ್ನನ್ನು ಜೆಡಿಎಸ್‌ ಬೆಳೆಸಿದೆ. ನಾನೂ ಪಕ್ಷ ಬೆಳೆಸಿದ್ದೇನೆ.4 ದಶಕಗಳಿಂದ ಜನತಾ ಪಕ್ಷ ಅನೇಕ ಜವಾಬ್ದಾರಿಗಳನ್ನು ನೀಡಿದ್ದು, ಸಮರ್ಥವಾಗಿ ನಿಭಾಯಿಸಿದ್ದೇನೆ’ ಎಂದು ಸ್ಮರಿಸಿದರು.

‘ಆಗ್ನೇಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಥವಾ ಬೇರೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ. ನನ್ನ ಮನವಿ ಪರಿಗಣಿಸಿದರೆ ಖಂಡಿತ ಬೇರೆ ಪಕ್ಷಕ್ಕೆ ಹೋಗುತ್ತೇನೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ADVERTISEMENT

‘ಅನುದಾನಿತ ಶಾಲೆಯ 14 ಸಾವಿರ ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಕಾಲ್ಪನಿಕ ವೇತನ ನೀಡಿಲ್ಲ. ಕೂಡಲೇ ಇವರಿಗೆ ಕಾಲ್ಪನಿಕ ವೇತನ ನೀಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿಅನುದಾನಿತ ಶಾಲೆಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಮಂಜನಾಯ್ಕ, ಎಂ. ಬಸವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.