ADVERTISEMENT

ಸಿ.ಎಂ ರಾಜೀನಾಮೆಗೆ ಜೆಡಿಎಸ್‌ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:55 IST
Last Updated 2 ಜುಲೈ 2025, 15:55 IST
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. 
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.    

ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಸಾಧ್ಯವಾಗದ ದುಸ್ಥಿತಿಗೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್‌ ಗೌಡ ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಡಳಿತ ಪಕ್ಷದ ಹಿರಿಯ ಶಾಸಕರೇ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯವು ಆರ್ಥಿಕ ದಿವಾಳಿಯತ್ತ ಸಾಗಿದೆ ಎಂದು ದೂರಿದರು.

ವಿಧಾನಪರಿಷತ್‌ ಸದಸ್ಯ ಟಿ.ಎನ್. ಜವರಾಯಿಗೌಡ, ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ, ಪಕ್ಷದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್‌, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಫ್ರೋಜ್‌ ಬೇಗ್‌, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ. ಪ್ರವೀಣ್ ಕುಮಾರ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.