ADVERTISEMENT

ರಾಜ್ಯಸಭೆ ಚುನಾವಣೆ: ಜೆಡಿಎಸ್ ವರಿಷ್ಠ ದೇವೇಗೌಡರಿಂದ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 8:51 IST
Last Updated 9 ಜೂನ್ 2020, 8:51 IST
ರಾಜ್ಯಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನಾಮಪತ್ರ ಸಲ್ಲಿಸಿದರು
ರಾಜ್ಯಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನಾಮಪತ್ರ ಸಲ್ಲಿಸಿದರು   

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನಾಮಪತ್ರ ಸಲ್ಲಿಸಿದರು.

ಸ್ವಂತ ಬಲದಿಂದ ಆಯ್ಕೆ ಆಗುವಷ್ಟು ಶಾಸಕರ ಸಂಖ್ಯೆ ಇಲ್ಲದಿರುವ ಕಾರಣ, ಕಾಂಗ್ರೆಸ್‌ ಬೆಂಬಲ ನೀಡಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರು ದೂರವಾಣಿ ಕರೆ ಮಾಡಿ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಿದ ಕಾರಣ ಮತ್ತು ದೇಶದ ಹಲವು ನಾಯಕರು ಮನವಿ ಮಾಡಿದ್ದರಿಂದ ದೇವೇಗೌಡರು ಸ್ಪರ್ಧೆಗೆ ಒಪ್ಪಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದೇವೇಗೌಡರು ತಮ್ಮ ರಾಜಕೀಯ ಜೀವನದಲ್ಲಿ ಎರಡನೇ ಬಾರಿಗೆ ರಾಜ್ಯಸಭೆಯನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಈ ಹಿಂದೆ ಹಲವು ಬಾರಿ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಕೆಲವು ಬಾರಿ ಸೋಲನುಭವಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಧ್ಯಕ್ಷರಾಗಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು.

ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.