
ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಅವರು ಖಾಲಿ ಟ್ರಂಕ್ ಎಂದಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಮತ್ತು ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಆರ್.ಸ್ಯಾಮುಯೆಲ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಟ್ರಂಕ್‌ಗಳನ್ನು ಹಿಡಿದು ಪ್ರತಿಭಟಿಸಿದರು. ಶಿವಕುಮಾರ್ ಅವರು ಕುಮಾರಸ್ವಾಮಿ ಅವರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಈಗ ಕೇಂದ್ರ ಸಚಿವರಾಗಿ ರಾಜ್ಯಕ್ಕೆ ನೀಡಿದ ಯೋಜನೆಗಳ ಕಡತಗಳಿದ್ದ ಒಂದು ಟ್ರಂಕ್ ಮತ್ತು ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಇರುವ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದ ಕಡತಗಳು ಇದ್ದ ಇನ್ನೊಂದು ಟ್ರಂಕ್ ಅನ್ನು ಕಾರ್ಯಕರ್ತರು ಪ್ರತಿಭಟನೆ ವೇಳೆ ಪ್ರದರ್ಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.