ADVERTISEMENT

ಮಳೆ ಹಾನಿ ಪ್ರದೇಶಗಳಿಗೆ ಜೆಡಿಎಸ್‌ ತಂಡ: ಸುರೇಶ್‌ ಬಾಬು

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 16:58 IST
Last Updated 9 ಡಿಸೆಂಬರ್ 2025, 16:58 IST
   

ಬೆಳಗಾವಿ: ಅತಿವೃಷ್ಟಿಯಿಂದ ಹಾನಿಯಾಗಿರುವ ಮೆಕ್ಕೆಜೋಳ, ಹತ್ತಿ ಬೆಳೆ ಪ್ರದೇಶಗಳಿಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಲಾಗುವುದು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಹೇಳಿದರು

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಜೆಡಿಎಸ್‌–ಬಿಜೆಪಿ ಹೋರಾಟದ ಫಲವಾಗಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ‌ ಬಗ್ಗೆ ಹೆಚ್ಚಿನ ಚರ್ಚೆಗೆ ಅವಕಾಶ ಸಿಕ್ಕಿದೆ. ಮಳೆಯಿಂದ ಮೆಕ್ಕೆಜೋಳ, ಹತ್ತಿ ಬೆಳೆಗೆ ತೀವ್ರ ಹಾನಿಯಾಗಿದೆ. ಜೆಡಿಎಸ್‌ ಮುಖಂಡರನ್ನು ಒಳಗೊಂಡ ತಂಡ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದೆ. ವರದಿಯನ್ನು ರಾಜ್ಯಪಾಲರಿಗೆ ಸಲ್ಲಿಸಲಿದೆ’ ಎಂದರು.

ಕೇಂದ್ರ ಸರ್ಕಾರದ ತಂಡ ಹಾನಿ ಪ್ರದೇಶಗಳಲ್ಲಿ ಈಗಾಗಲೇ ಸಮೀಕ್ಷೆ ಪೂರ್ಣಗೊಳಿಸಿದೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ತುಂಗಭದ್ರಾ ಜಲಾಶಯದ ಗೇಟ್‌ ಸೇರಿದಂತೆ ಎಲ್ಲ ವಿಷಯಗಳಲ್ಲೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ADVERTISEMENT

‘ಜೆಡಿಎಸ್‌ ಸದಸ್ಯರು ಭತ್ಯೆ ಕೂಡ ತೆಗೆದುಕೊಳ್ಳದೆ ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ಸದಸ್ಯರ ಬೇಡಿಕೆಯಂತೆ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಸಿಕ್ಕಿದೆ. ಈ ವಿಷಯದಲ್ಲಿ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರ ಅವರ ಅವಿರತ ಹೋರಾಟವಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.