ADVERTISEMENT

ಜಿಂದಾಲ್‌ಗೆ ಭೂಮಿ: ವಿರೋಧ ಸರಿಯಲ್ಲ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 17:20 IST
Last Updated 30 ಜೂನ್ 2019, 17:20 IST

ಬಳ್ಳಾರಿ: ಜಿಂದಾಲ್‌ ಸಂಸ್ಥೆಗೆ ಸರ್ಕಾರಿ ಭೂಮಿ ಪರಭಾರೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಇದನ್ನು ವಿರೋಧಿಸುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹೇಳಿದರು.

ನಗರದಲ್ಲಿ ಭಾನುವಾರ ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಶಾಸಕ ಆನಂದ್ ಸಿಂಗ್ ಮತ್ತು ಅನಿಲ್ ಲಾಡ್ ಅವರು ವಿರೋಧ ವ್ಯಕ್ತಪಡಿಸುತ್ತಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಜಿಂದಾಲ್‌ಗೆ ನ್ಯಾಯಯುತವಾಗಿ ಭೂಮಿ ನೀಡಲಾಗುತ್ತಿದೆ. ಹೀಗೆ ಉದ್ಯಮಗಳಿಗೆ ತಡೆ ಮಾಡಿದರೆ, ಮುಂದೆ ಕೈಗಾರಿಕೆಗಳುಜಿಲ್ಲೆಗೆ ಬರುವುದು ಕಷ್ಟವಾಗಲಿದೆ ಎಂದರು.

ಜಿಂದಾಲ್‌ಗೆ ಭೂಮಿ ವಿಚಾರವು ಸ್ಥಳೀಯ ಬಿಜೆಪಿ ನಾಯಕರಿಗೆ ವಾಸ್ತವಾಂಶದ ಅರಿವಿರುವುದರಿಂದ ಮೌನವಾಗಿದ್ದಾರೆ. ಗೊತ್ತಿಲ್ಲದ ರಾಜ್ಯ ಮಟ್ಟದ ನಾಯಕರು ಮತ್ತು ಹೊರಗಿನ ವಾಟಾಳ್ ನಾಗರಾಜ ಬಂದು ವಿರೋಧ ಮಾಡುತ್ತಾರೆ. ಇಲ್ಲಿ ರೈತರ ಭೂಮಿಯನ್ನು ಯಾರೂ ಕೊಡುತ್ತಿಲ್ಲ. ಸರ್ಕಾರದ ಭೂಮಿಯನ್ನು ಕೊಡಲಾಗುತ್ತಿದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.