ADVERTISEMENT

ಜಮೀರ್ ಹೇಳಿಕೆಗೆ ಜೊಲ್ಲೆ ಕಿಡಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 14:21 IST
Last Updated 4 ಏಪ್ರಿಲ್ 2020, 14:21 IST

ಬೆಳಗಾವಿ: ‘ಬೆಂಗಳೂರಿನಸಾರಾಯಿಪಾಳ್ಯದ ಸಾದಿಕ್ ಲೇಔಟ್‌ನಲ್ಲಿ ಆಶಾ ಕಾರ್ಯಕರ್ತೆಯರು ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ) ಮಾಹಿತಿ ಕೇಳಲು ಹೋಗಿದ್ದರು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್‌ಖಾನ್‌ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಅವರದ್ದು ಮೂರ್ಖತನದ ಹೇಳಿಕೆಯಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಕಿಡಿಕಾರಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾರ್ಯಕರ್ತೆಯರು ಕೊರೊನಾ ಸೋಂಕಿತರ ಮಾಹಿತಿ ಪಡೆಯಲು ಹೋಗಿದ್ದರು. ಅವರು ಜನರ ಆರೋಗ್ಯ ಕಾಪಾಡಲು ಶ್ರಮಿಸುತ್ತಿದ್ದಾರೆ. ಹಗುರವಾದ ಹೇಳಿಕೆ ನೀಡುವುದು ಸರಿಯಲ್ಲ. ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ಜಮೀರ್ ಮಾತನಾಡುವುದನ್ನು ನೋಡಿದರೆ ಕೊರೊನಾ ನಿಯಂತ್ರಣ ವಿಷಯದಲ್ಲಿ ವಿಪಕ್ಷದವರು ಎಷ್ಟು ಗಂಭೀರವಾಗಿದ್ದಾರೆ ಎನ್ನುವುದು ಗೊತ್ತಾಗುತ್ತದೆ’ ಎಂದು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.