ಅರ್ಜುನ್ ದೇವ್
ಬೆಂಗಳೂರು: ಪತ್ರಕರ್ತ ಎನ್. ಅರ್ಜುನ ದೇವ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಏ.24) ನಿಧನರಾದರು.
ಮೃತರಿಗೆ ಇಬ್ಬರು ಪುತ್ರರಿದ್ದಾರೆ.
ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅರ್ಜುನ ದೇವ ಅವರು 'ಪ್ರಜಾವಾಣಿ', ತಾಯಿನಾಡು, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಸೂರ್ಯೋದಯ ಪತ್ರಿಕೆಯ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.
ಕರ್ನಾಟಕ ಮಾಧ್ಯಮ ಅಕಾಡೆಮಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.