ADVERTISEMENT

ಪಕ್ಷ‌ ಬಲವರ್ಧನೆಗೆ ನಡ್ಡಾ ಸೂಚನೆ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 7:48 IST
Last Updated 17 ಜುಲೈ 2021, 7:48 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಶನಿವಾರ ‌ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.‌ನಡ್ಡಾ ಅವರನ್ನು ಭೇಟಿ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಶನಿವಾರ ‌ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.‌ನಡ್ಡಾ ಅವರನ್ನು ಭೇಟಿ ಮಾಡಿದರು.   

ನವದೆಹಲಿ: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಿಶೇಷ ಗಮನ‌ ಹರಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶನಿವಾರ ನಡ್ಡಾ ಅವರೊಂದಿಗಿನ ಭೇಟಿಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ನಡ್ಡಾ ಅವರು ನನ್ನ ಮೇಲೆ ಸಾಕಷ್ಟು ನಂಬಿಕೆ ಹೊಂದಿದ್ದು, ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ಪಕ್ಷ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪೂರ್ಣ‌ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ‌ ನೀಡಿದ್ದಾರೆ ಎಂದು ಅವರು ತಿಳಿಸಿದರು.

ADVERTISEMENT

'ನಾನು ರಾಜೀನಾಮೆ‌ ನೀಡುವ‌ ಪ್ರಸಂಗ‌ ಬಂದಿಲ್ಲ. ರಾಜೀನಾಮೆ ವಿಷಯ ಮುಚ್ಚಿಡುವಂಥದ್ದಲ್ಲ. ಯಾರೂ ಈವರೆಗೆ ರಾಜೀನಾಮೆ ನೀಡುವಂತೆ ಸೂಚಿಸಿಲ್ಲ. ಆ ರೀತಿಯ ಸುದ್ದಿಗಳು ಹಬ್ಬಿದಲ್ಲಿ ಅದಕ್ಕೆ‌ಬೆಲೆ ಇಲ್ಲ' ಎಂದು ಅವರು ಸ್ಪಷ್ಟಪಡಿಸಿದರು.

'ನಾನು ಆಗಸ್ಟ್ ಮೊದಲ ವಾರ ಮತ್ತೆ ಬರುವೆ. ಪಕ್ಷದ‌ ಹಾಗೂ ಕೇಂದ್ರದ ನಾಯಕರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಕುರಿತು‌ ಚರ್ಚಿಸುವೆ ಎಂದು ಅವರು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಬಳಿಕ ಬಿಎಸ್‌ ಯಡಿಯೂರಪ್ಪ ಬೆಂಗಳೂರಿಗೆ ಮರಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.