ADVERTISEMENT

ಬಿಜೆಪಿ ಅಧ್ಯಕ್ಷ ನಡ್ಡಾ ಇಂದು ಬೆಂಗಳೂರಿಗೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 20:30 IST
Last Updated 17 ಜೂನ್ 2022, 20:30 IST
ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾ    

ಬೆಂಗಳೂರು: ಬಿಜೆಪಿರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶನಿವಾರ ಪಕ್ಷದ ರಾಷ್ಟ್ರೀಯಒಬಿಸಿ ಮೋರ್ಚಾದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಯಲಹಂಕ ಸಮೀಪದ ರಮಡಾ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಮೂರು ದಿನಗಳ ಸಮಾವೇಶ ಶನಿವಾರ ಮುಕ್ತಾಯವಾಗಲಿದೆ. ಈ ಸಂದರ್ಭದಲ್ಲಿ ಅವರು ಪಕ್ಷದ ಒಬಿಸಿ ಶಾಸಕರು, ವಿಧಾನಪರಿಷತ್‌ ಸದಸ್ಯರು ಮತ್ತು ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಭಾಗವಹಿಸಲಿದ್ದಾರೆ.

ಇದೇ ವೇಳೆ ಅವರು ಬೊಮ್ಮಾಯಿ, ನಳಿನ್‌ ಕುಮಾರ್ ಕಟೀಲ್‌ ಮತ್ತು ಇತರ ನಾಯಕರ ಜತೆ ಮುಂಬರುವ ಚುನಾವಣೆಗಳ ಸಿದ್ಧತೆ, ಅದಕ್ಕಾಗಿ ಸಂಘಟನೆಯನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ADVERTISEMENT

ಆ ಬಳಿಕ ಅವರು ಚಿತ್ರದುರ್ಗದಲ್ಲಿ ರಾಜ್ಯದ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿರುವ ಬಿಜೆಪಿ ಸದಸ್ಯರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮುರುಘಾಮಠಕ್ಕೂ ಭೇಟಿ ನೀಡಿ ಶಿವಮೂರ್ತಿ ಶರಣರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.