ADVERTISEMENT

ಕರ್ನಾಟಕ ಹೈಕೋರ್ಟ್‌ಗೆ ರಿತು ರಾಜ್‌ ಅವಸ್ಥಿ ಸಿಜೆ?

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 18:45 IST
Last Updated 17 ಸೆಪ್ಟೆಂಬರ್ 2021, 18:45 IST
   

ನವದೆಹಲಿ: ಎಂಟು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ (ಸಿಜೆ) ನೇಮಕ ಮತ್ತು ಐದು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠದ ಹಿರಿಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಶಿಫಾರಸು ಮಾಡಲಾಗಿದೆ.

ತ್ರಿಪುರಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಕಿಲ್‌ ಖುರೇಷಿ ಅವರನ್ನು ರಾಜಸ್ಥಾನದ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿದೆ. ಖುರೇಷಿ ಅವರು ಮೊದಲು ಗುಜರಾತ್‌ ಹೈಕೋರ್ಟ್‌ ನಲ್ಲಿ ಇದ್ದರು. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ
ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಕೊಲಿಜಿಯಂ ಸದಸ್ಯರಲ್ಲಿ ಸಹಮತ ಮೂಡಿರಲಿಲ್ಲ. ಹಾಗಾಗಿಯೇ, ಹೈಕೋರ್ಟ್‌ ನ್ಯಾಯ
ಮೂರ್ತಿಗಳಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಯಾಗಿ ಬಡ್ತಿ ನೀಡುವ ಪ್ರಕ್ರಿಯೆ ಯು ನ್ಯಾಯಮೂರ್ತಿ ಆರ್‌.ಎಫ್‌. ನರಿಮನ್‌ ಅವರು ಆಗಸ್ಟ್‌ 12ರಂದು ನಿವೃತ್ತಿ ಯಾಗುವ ತನಕ ಸ್ಥಗಿತಗೊಂಡಿತ್ತು.

ADVERTISEMENT

ಕರ್ನಾಟಕ ಹೈಕೋರ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನ್ಯಾಯ ಮೂರ್ತಿ ಸತೀಶ್‌ ಚಂದ್ರ ಶರ್ಮಾ ಅವರಿಗೆ ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ನೀಡಲು ಶಿಫಾರಸು ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿದ್ದ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿಗೆ ಗುಜರಾತ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಮತ್ತು ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಹಿಂದೆ ಇದ್ದ ಆರ್‌.ವಿ.ಮಳಿಮಠ ಅವರಿಗೆ ಮಧ್ಯ ಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಕೊಡಲು ಶಿಫಾರಸು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.