ADVERTISEMENT

ರಾಷ್ಟ್ರದ್ರೋಹಿಗಳಿಗೆ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಒತ್ತಾಯ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 15:46 IST
Last Updated 9 ಫೆಬ್ರುವರಿ 2024, 15:46 IST
ಕೆ.ಎಸ್. ಈಶ್ವರಪ್ಪ
ಕೆ.ಎಸ್. ಈಶ್ವರಪ್ಪ   

ಶಿವಮೊಗ್ಗ: ’ದೇಶ ಒಡೆಯುವ ಹೇಳಿಕೆ ನೀಡುವ ರಾಷ್ಟ್ರದ್ರೋಹಿಗಳನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದೇನೆಯೇ ಹೊರತು ಯಾರನ್ನೋ ಗುಂಡಿಟ್ಟು ಕೊಲ್ಲುವಂತೆ ನಾನು ಹೇಳಿಲ್ಲ‘ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು.

ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದ ಅವರು, ’ಗ್ಯಾರಂಟಿ‘ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾದ ಮೇಲೆ ಕಾಂಗ್ರೆಸ್‌ನವರಿಗೆ ವಿಷಯವೇ ಇಲ್ಲವಾಗಿದೆ. ಇಂತಹ ಏನೇನೊ ವಿಷಯಗಳನ್ನು ತೆಗೆಯುತ್ತಿದ್ದಾರೆ‘ ಎಂದು ಲೇವಡಿ ಮಾಡಿದರು.

’ದೇಶ ಒಡೆಯುವ ರಾಷ್ಟ್ರದ್ರೋಹಿ ಹೇಳಿಕೆಯನ್ನು ಸಂಸದ ಡಿ.ಕೆ.ಸುರೇಶ ಹಾಗೂ ಶಾಸಕ ವಿನಯ ಕುಲಕರ್ಣಿ ನೀಡಿದ್ದಾರೆ. ಅದಕ್ಕೆ ಅವರ ಸಹೋದರ ಡಿ.ಕೆ.ಶಿವಕುಮಾರ್ ಬೆಂಬಲ ಕೊಟ್ಟಿದ್ದಾರೆ. ಆದರೆ ರಾಷ್ಟ್ರ ಒಡೆಯುವ ಈ ನಿಲುವನ್ನು ಯಾವುದೇ ಕಾರಣಕ್ಕೂ ನಾನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಈ ದೇಶ ಒಂದೇ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುನರುಚ್ಚರಿಸಿದ್ದಾರೆ. ಇದನ್ನೆಲ್ಲ ಗಮನಿಸಬಹುದು‘ ಎಂದು ಈಶ್ವರಪ್ಪ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.