ADVERTISEMENT

ಕೆ–ಸೆಟ್‌ ಮತ್ತೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 18:23 IST
Last Updated 21 ಏಪ್ರಿಲ್ 2021, 18:23 IST

ಮೈಸೂರು: ಏಪ್ರಿಲ್‌ 25ಕ್ಕೆ ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ–ಸೆಟ್‌) ಮತ್ತೆ ಮುಂದೂಡಲಾಗಿದೆ.

ಈ ಮೊದಲು ಏ.11ರಂದು ನಡೆಸಲು ನಿಗದಿ ಮಾಡಿದ್ದ ಪರೀಕ್ಷೆಯನ್ನು ಸಾರಿಗೆ ನೌಕರರ ಮುಷ್ಕರ ಕಾರಣ 25ಕ್ಕೆ ಮುಂದೂಡಲಾಗಿತ್ತು. ಕೊರೊನಾ ಸೋಂಕು ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಿರುವ ಕಾರಣ ಈಗ ಎರಡನೇ ಬಾರಿ ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಮೈಸೂರು ವಿಶ್ವವಿದ್ಯಾಲಯದ ಕೆ–ಸೆಟ್ ಸಂಯೋಜಕ ಪ್ರೊ.ಎಚ್.ರಾಜಶೇಖರ್ ತಿಳಿಸಿದ್ದಾರೆ.

ಮಾಹಿತಿಗೆ http://kset.uni-mysore.ac.in

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.