ADVERTISEMENT

ಮಾನನಷ್ಟ ಮೊಕದ್ದಮೆ: ಸಚಿವ ಸುಧಾಕರ್‌ಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 20:17 IST
Last Updated 8 ಡಿಸೆಂಬರ್ 2022, 20:17 IST
ಸುಧಾಕರ್‌
ಸುಧಾಕರ್‌   

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ (ಡಿ.6) ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾರೆ.

ಸಚಿವ ಸುಧಾಕರ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.

ಡಾ.ಕೆ.ಸುಧಾಕರ್ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದರು. ಅವರ ನೇಮಕ ಪ್ರಶ್ನಿಸಿ ಆಂಜನೇಯರೆಡ್ಡಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆಗ ಸುಧಾಕರ್, ‘ರೈತರಿಗೆ ಕಳ್ಳಬಟ್ಟಿ ಕುಡಿಸಿ ಜೈಲು ಸೇರಿದ ವ್ಯಕ್ತಿ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದರು. ಅವರ ಈ ಹೇಳಿಕೆಯ ವಿರುದ್ಧ ಆಂಜನೇಯ ರೆಡ್ಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯವು ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸಮನ್ಸ್ ಜಾರಿ ಮಾಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.