ADVERTISEMENT

ಒಂದೂವರೆ ತಿಂಗಳಲ್ಲಿ ಕೋವಿಡ್‌ 3ನೇ ಅಲೆ ಇಳಿಕೆ: ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 19:56 IST
Last Updated 5 ಜನವರಿ 2022, 19:56 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಚಿಕ್ಕಬಳ್ಳಾಪುರ: ‘ಕೋವಿಡ್‌ ಮೂರನೇ ಅಲೆ ಒಂದೂವರೆ ತಿಂಗಳಲ್ಲಿ ಕಡಿಮೆ ಆಗುತ್ತದೆ ಎಂಬುದಾಗಿ ತಾಂತ್ರಿಕ ಸಲಹಾ ಸಮಿತಿ ವರದಿ ಕೊಟ್ಟಿದೆ’ ಎಂದುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಐದಾರು ವಾರ ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು.ಮೂರನೇ ಅಲೆಯೇ ಅಂತಿಮವಾದುದು ಎಂದು ನಿರೀಕ್ಷಿಸಲಾಗಿದೆ’ ಎಂದರು.

ಮುಂದಿನ ಒಂದು ವಾರದ ಒಳಗೆ ರಾಜ್ಯದ 15ರಿಂದ 18 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಕೋವಿಡ್ ಲಸಿಕೆ ಹಾಕಲಾಗುವುದು.ರಾಜ್ಯದ ಗಡಿಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಹೊರರಾಜ್ಯ, ದೇಶದಿಂದ ಬಂದವರ ಬಗ್ಗೆ ನಿಗಾವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ADVERTISEMENT

ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ಓಮೈಕ್ರಾನ್ ತಳಿ ಸೋಂಕು ತಡೆಗೆ ಯಾವ ರೀತಿಯ ಕ್ರಮವನ್ನು ಅನುಸರಿಸಲಾಗಿದೆ ಎನ್ನುವುದನ್ನು ತಜ್ಞರಿಂದ ತಿಳಿದು ಚರ್ಚಿಸಿದ ನಂತರ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.