ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ಗೆ ಆಳ್ವಾಸ್ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಸಂಸ್ಥಾಪನಾ ಅಧ್ಯಕ್ಷ ಡಾ. ಮೋಹನ್ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ.
‘ಡಾ.ಟಿ.ವಿ. ವೆಂಕಟಾಚಲಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ಗೆ ಹಿರಿಯ ವಿದ್ವಾಂಸ ಡಾ.ಜಿ.ಎಸ್. ಕಾಪಸೆ ಭಾಜನರಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಮಂಗಳವಾರ ಈ ಆಯ್ಕೆಗಳು ನಡೆದಿವೆ.
ಈ ಪ್ರಶಸ್ತಿಗಳು ಕ್ರಮವಾಗಿ ₹ 51 ಸಾವಿರ ಹಾಗೂ ₹ 10 ಸಾವಿರ ನಗದು ಬಹುಮಾನವನ್ನು ಒಳಗೊಂಡಿವೆ. ಜು.1ರಂದು ‘ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭ ಹಾಗೂ ಜು.7ರಂದು ‘ಡಾ.ಟಿ.ವಿ. ವೆಂಕಟಾಚಲಶಾಸ್ತ್ರಿ ವಿದ್ವತ್ ದತ್ತಿ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.