ADVERTISEMENT

ಪೇಯಿಂಗ್‌ ಗೆಸ್ಟ್‌ ಕಾರ್ಯನಿರ್ವಹಣೆಗೆ ಹೊಸ ಕಾನೂನು

ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 15:28 IST
Last Updated 5 ಜೂನ್ 2019, 15:28 IST
ಯು.ಟಿ. ಖಾದರ್
ಯು.ಟಿ. ಖಾದರ್   

ಮಂಗಳೂರು: ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಪೇಯಿಂಗ್‌ ಗೆಸ್ಟ್‌ ಹಾಗೂ ಹೋಂಸ್ಟೇಗಳನ್ನು ಕಾನೂನು ಅಡಿಯಲ್ಲಿ ಕಾರ್ಯನಿರ್ವಹಿಸುವಂತೆ ಮಾಡಲು ಹೊಸ ಕಾನೂನನ್ನು ರಾಜ್ಯ ಸರ್ಕಾರವು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪೇಯಿಂಗ್‌ ಗೆಸ್ಟ್‌ ಹಾಗೂ ಹೋಂಸ್ಟೇಗಳು ಸರ್ಕಾರದ ಹೊಸ ನೀತಿ, ನಿಯಮಗಳ ಆಧಾರದಲ್ಲಿ ಕಾರ್ಯನಿರ್ವಹಿಸಬೇಕು. ಪೇಯಿಂಗ್‌ ಗೆಸ್ಟ್‌ ಹಾಗೂ ಹೋಂಸ್ಟೇಗಳನ್ನು ಆರಂಭಿಸುವ ಮೊದಲು ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯ. ಈಗಾಗಲೇ ಈ ಸಂಬಂಧ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜತೆಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಪೇಯಿಂಗ್‌ ಗೆಸ್ಟ್‌ಗಳಿಗೆ ಸೇರುವ ಎಲ್ಲರಿಗೂ ಸೌಲಭ್ಯಗಳನ್ನು ನೀಡುವುದು ಕಡ್ಡಾಯ. ಪೇಯಿಂಗ್‌ ಗೆಸ್ಟ್‌ ಮಾಲೀಕರು ಸೌಲಭ್ಯ ನೀಡದೇ ಇದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದೇ ರೀತಿ ಹೋಂಸ್ಟೇ ಸ್ಥಾಪನೆ ಹಾಗೂ ನಿರ್ವಹಣೆ ಕುರಿತ ನಿಯಾಮಾವಳಿಗಳು ಹೊಸ ಕಾನೂನಿನಲ್ಲಿ ಇರಲಿವೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.