ADVERTISEMENT

ಕಲಬುರ್ಗಿ ಪಾಲಿಕೆ | ಕಾಂಗ್ರೆಸ್‌ಗೆ ಸಹಕಾರ ನೀಡಲು ಖರ್ಗೆ ಕೇಳಿದ್ದಾರೆ: ದೇವೇಗೌಡ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 10:39 IST
Last Updated 7 ಸೆಪ್ಟೆಂಬರ್ 2021, 10:39 IST
ಎಚ್.ಡಿ. ದೇವೇಗೌಡ ಮತ್ತು ಮಲ್ಲಿಕಾರ್ಜುನ ಖರ್ಗೆ
ಎಚ್.ಡಿ. ದೇವೇಗೌಡ ಮತ್ತು ಮಲ್ಲಿಕಾರ್ಜುನ ಖರ್ಗೆ    

ಬೆಂಗಳೂರು: ‘ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ನಾಲ್ಕು ಸ್ಥಾನ ಗಳಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡುವಂತೆ ರಾಜ್ಯಸಭೆಯ ವಿರೋದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ. ನನ್ನ ಮತ್ತು ಎಚ್. ಡಿ. ಕುಮಾರಸ್ವಾಮಿ ಜತೆ ಅವರು ಮಾತನಾಡಿದ್ದಾರೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.

ಬಿಜೆಪಿಗೆ ಸಹಕಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕು‌ಮಾರಸ್ವಾಮಿ ಜತೆ ಮಾತನಾಡಿರುವ ಸಾಧ್ಯತೆ ಇದೆ. ಸ್ಥಳೀಯ ಮುಖಂಡರ ಅಭಿಪ್ರಾಯ ಕೇಳದೆ ನಿರ್ಧಾರ ಕೈಗೊಳ್ಳದಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಲಾಗಿದೆ ಎಂದರು.

'ಖರ್ಗೆ ಅವರು ಅವರ ಪಕ್ಷದವರನ್ನು ಸಂಪರ್ಕಿಸಿ ಮಾತನಾಡಿದ್ದಾರೆ ಅನಿಸುತ್ತದೆ. ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕುಳಿತು ಮಾತನಾಡಲಿ ಆಮೇಲೆ ನೋಡೋಣ' ಎಂದರು.

ADVERTISEMENT

ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಿಂದ ನಿರಾಶರಾಗಬೇಕಿಲ್ಲ. ಜೆಡಿಎಸ್ ಸದಸ್ಯತ್ವ ನೋಂದಣಿಗೆ ಆದ್ಯತೆ ನೀಡಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.