ADVERTISEMENT

ಕಳಸಾ ಬಂಡೂರಿ ಚುನಾವಣೆ ಗಿಮಿಕ್‌: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 12:46 IST
Last Updated 2 ಜನವರಿ 2023, 12:46 IST
   

ಬೆಳಗಾವಿ: ‘ಕಳಸಾ ಬಂಡೂರಿ ನಾಲಾ ಯೋಜನೆ ಕಾಮಗಾರಿಯ ಸಮಗ್ರ ಯೋಜನಾ ವರದಿಗೆ ಅನುಮೋದನೆ, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿಯ ಚುನಾವಣೆ ಗಿಮಿಕ್’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪಾದಿಸಿದರು.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರು ಇಂತಹ ದಾಳ ಉರುಳಿಸುತ್ತಿದ್ದಾರೆ. ಆದರೆ, ಅವುಗಳಲ್ಲಿ ಸ್ಪಷ್ಟತೆ ಇಲ್ಲ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT