ADVERTISEMENT

ಕಲಬುರ್ಗಿ: 46 ಡಿಗ್ರಿ ಸೆಲ್ಸಿಯಸ್ ದಾಖಲೆ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 29 ಮೇ 2019, 19:34 IST
Last Updated 29 ಮೇ 2019, 19:34 IST
   

ಕಲಬುರ್ಗಿ: ದಿನೇ ದಿನೇ ಬಿಸಿಲು ಹೆಚ್ಚುತ್ತಲೇ ಇದ್ದು,ಬುಧವಾರ ಅತ್ಯಧಿಕ 46 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, ಕನಿಷ್ಠ 30.2 ಡಿಗ್ರಿ ಸೆಲ್ಸಿಯಸ್ ಇತ್ತು. ಈ ಅವಧಿಯ ಅತ್ಯಧಿಕ ಉಷ್ಣಾಂಶ ಇದಾಗಿದೆ.

ಹಗಲು–ರಾತ್ರಿ ನಿರಂತರವಾಗಿ ಬಿಸಿಗಾಳಿ ಬೀಸುತ್ತಿದ್ದು, ಜನ ತತ್ತರಿಸಿದ್ದಾರೆ.

ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೂನ್‌ 14ರ ವರೆಗೆ ಹಾಗೂ ರಾಯಚೂರು ಜಿಲ್ಲೆಯಲ್ಲಿ ಜೂನ್ 5ರ ವರೆಗೆ ಪ್ರಾಥಮಿಕ ಶಾಲೆಗಳಿಗೆ ರಜೆ ವಿಸ್ತರಿಸಲಾಗಿದೆ. ಹೈದರಾಬಾದ್‌ ಕರ್ನಾಟಕದ ಇತರೆ ಜಿಲ್ಲೆಗಳ ಶಾಲೆಗಳಿಗೂ ರಜೆ ವಿಸ್ತರಿಸಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

ADVERTISEMENT

ರಾಯಚೂರು ಜಿಲ್ಲೆಯಲ್ಲಿ 43, ಬೀದರ್‌ 42, ಕೊಪ್ಪಳ 40, ಯಾದಗಿರಿ ಜಿಲ್ಲೆಯಲ್ಲಿ 43 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.