ADVERTISEMENT

ಕಲಬುರ್ಗಿ ಭಾಗದಲ್ಲಿ ಭಾರಿ ಮಳೆ

ಹುಬ್ಬಳ್ಳಿ, ಚಿತ್ರದುರ್ಗದಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 19:45 IST
Last Updated 3 ಅಕ್ಟೋಬರ್ 2019, 19:45 IST
ಕೊಪ್ಪಳ ಜಿಲ್ಲೆ ಮುನಿರಾಬಾದ್ ಸಮೀಪ ಹೊಸಲಿಂಗಾಪುರ ಗ್ರಾಮದಲ್ಲಿ ಗುರುವಾರ ತುಂಗಭದ್ರಾ ಜಲಾಶಯದ ಎಡದಂಡೆ ಮುಖ್ಯಕಾಲುವೆಗೆ ನಿರ್ಮಿಸಿದ ಸೇತುವೆ ಮೇಲೆ ನೀರು ನಿಂತು ಪಾದಚಾರಿಗಳು ಮತ್ತು ವಾಹನ ಸವಾರರು ಪರದಾಡಿದರು
ಕೊಪ್ಪಳ ಜಿಲ್ಲೆ ಮುನಿರಾಬಾದ್ ಸಮೀಪ ಹೊಸಲಿಂಗಾಪುರ ಗ್ರಾಮದಲ್ಲಿ ಗುರುವಾರ ತುಂಗಭದ್ರಾ ಜಲಾಶಯದ ಎಡದಂಡೆ ಮುಖ್ಯಕಾಲುವೆಗೆ ನಿರ್ಮಿಸಿದ ಸೇತುವೆ ಮೇಲೆ ನೀರು ನಿಂತು ಪಾದಚಾರಿಗಳು ಮತ್ತು ವಾಹನ ಸವಾರರು ಪರದಾಡಿದರು   

ಕಲಬುರ್ಗಿ: ಕಲಬುರ್ಗಿ ಭಾಗದಲ್ಲಿ ಗುರುವಾರ ಭಾರಿ ಮಳೆ ಆಗಿದೆ.

ಕಲಬುರ್ಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ವಿವಿಧೆಡೆ ವ್ಯಾಪಕ ಮಳೆಯಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ, ಕಾಳಗಿ, ಅಫಜಲ‍ಪುರ, ವಾಡಿ, ಶಹಾಬಾದ್‌ ಮತ್ತು ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನ ಹಿಟ್ನಾಳ ಮತ್ತು ಬೇವಿನಹಳ್ಳಿಯಲ್ಲಿ ಆಲಿಕಲ್ಲು ಮಳೆ ಆಗಿದೆ. ಹುಲಿಗಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

ಹೊಸಲಿಂಗಾಪುರ ಗ್ರಾಮದಲ್ಲಿ ತುಂಗಭದ್ರಾ ಜಲಾಶಯದ ಎಡದಂಡೆ ಮುಖ್ಯ ಕಾಲುವೆಗೆ ನಿರ್ಮಿಸಿದ ಸೇತುವೆ ಮೇಲೆ ನೀರು ನಿಂತು ಪಾದಚಾರಿಗಳು ಮತ್ತು ವಾಹನ ಸವಾರರು ಪರದಾಡಿದರು.

ADVERTISEMENT

ಯಾದಗಿರಿ ಜಿಲ್ಲೆಯ ಗುರುಮಠಕಲ್‌ ಹಾಗೂ ಶಹಾಪುರ ತಾಲ್ಲೂಕಿನಲ್ಲಿಯೂ ಕೆಲ ಹೊತ್ತು ಮಳೆ ಸುರಿಯಿತು. ರಾಯಚೂರು ಜಿಲ್ಲೆಯ ಕವಿತಾಳದಲ್ಲಿ ಜಿಟಿ ಜಿಟಿ ಮಳೆ ಆಗಿದೆ.

ಗುಡುಗು ಸಹಿತ ಮಳೆ: ಹುಬ್ಬಳ್ಳಿ, ಶಿರಸಿ, ಸಿದ್ದಾಪುರ, ಬೆಳಗಾವಿ, ಖಾನಾಪುರ, ಬೈಲಹೊಂಗಲದಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಸಾಧಾರಣ ಮಳೆ: ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಗುರುವಾರ ಸಾಧಾರಣ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದೆ. ಜಿಲ್ಲೆಯ ಹರಿಹರ, ಹೊನ್ನಾಳಿ, ಹರಪನಹಳ್ಳಿ ತಾಲ್ಲೂಕುಗಳಲ್ಲಿ ಸಾಧಾರಣ ಮಳೆಯಾಯಿತು. ಚಿತ್ರದುರ್ಗ ಜಿಲ್ಲೆಯ ಕೆಲವೆಡೆ ಉತ್ತಮ ಮಳೆಯಾಗಿದೆ. ಹೊಸದುರ್ಗದಲ್ಲಿ ಧಾರಾಕಾರ ಮಳೆಯಾಗಿದೆ.

ಸಿಡಿಲು ಬಡಿದು ಇಬ್ಬರ ಸಾವು

ಹುಬ್ಬಳ್ಳಿ: ಗದಗ ಜಿಲ್ಲೆಯ ರೋಣ ಪಟ್ಟಣದ ಶರಣಮ್ಮ ಶಿವಪ್ಪ ಹವಳಪ್ಪನವರ (45) ಎಂಬುವರು ಸಿಡಿಲು ಬಡಿದು ಗುರುವಾರ ಮೃತಪಟ್ಟಿದ್ದಾರೆ. ಜಮೀನಿನಲ್ಲಿದ್ದಾಗ ಸಂಜೆ 4 ಗಂಟೆಗೆ ಸಿಡಿಲು ಬಡಿದಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ರಾಜನಾಳ ಗ್ರಾಮದ ಸುಶಿಲೆವ್ವ ಪರಸಪ್ಪ ಚಿಮ್ಮಲಗಿ (50) ಸಿಡಿಲು ಬಡಿದು ಮೃತ‍ಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.