ಕಾರವಾರ: ಕಾಳಿ ನದಿಯ ಪ್ರವಾಹದಿಂದ ಬಾಧಿತವಾಗಿರವ ಕೈಗಾ, ಕದ್ರಾ ಭಾಗದಲ್ಲಿ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದುಕದ್ರಾ ಅಣೆಕಟ್ಟೆಯ ಒಳಹರಿವನ್ನು ಆಧರಿಸಿ ಹೊರಹರಿವು ಕಡಿಮೆ ಮಾಡುವ ಬಗ್ಗೆನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.
ನೆರೆ ಪೀಡಿತ ಪ್ರದೇಶಗಳಲ್ಲಿ ಸಂಜೆಯ ವೇಳೆಗೆ ನೀರಿನ ಮಟ್ಟ ನಿಧಾನವಾಗಿ ಇಳಿಕೆಯಾಗಬಹುದು ಎಂದೂ ವಿಶ್ವಾಸ ವ್ಯಕ್ತಪಡಿಸದ್ದಾರೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗೀಲ್, ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಮೊಹಮ್ಮದ್ ರೋಶನ್, ಎಸ್.ಪಿ. ವಿನಾಯಕ ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಕದ್ರಾದ ಕೆಪಿಸಿ ಅತಿಥಿ ಗೃಹದಲ್ಲೇ ಮೂರು ದಿನಗಳಿಂದ ಮೊಕ್ಕಾಂ ಹೂಡಿದ್ದಾರೆ. ಗ್ರಾಮದ ವಿವಿಧೆಡೆ ಸಂಚರಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.