ADVERTISEMENT

ಕಲ್ಯಾಣ ಕರ್ನಾಟಕ ಇಲಾಖೆ: ಯೋಜನೆ ಸಚಿವರೇ ಉಸ್ತುವಾರಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 18:07 IST
Last Updated 17 ಸೆಪ್ಟೆಂಬರ್ 2025, 18:07 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸ್ಥಾಪನೆಗೊಳ್ಳುವ ಪ್ರತ್ಯೇಕ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಲಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸಿಬ್ಬಂದಿ ಕೊರತೆ ಇರುವ ಕಾರಣ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಮತ್ತು ಆ ಪ್ರದೇಶದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡುವ ಅಧಿಕಾರ ನೀಡಲು ಸರ್ಕಾರ ತೀರ್ಮಾನಿಸಿದೆ.

ADVERTISEMENT

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಾರೆ. ಮಂಡಳಿಯ ಎಲ್ಲ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371 ಜೆಗೆ ಸಂಬಂಧಿಸಿದ ವಿಷಯ ನಿರ್ವಹಿಸುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.