ADVERTISEMENT

ಕಲ್ಯಾಣ ಕರ್ನಾಟಕದಲ್ಲಿ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 15:32 IST
Last Updated 12 ಸೆಪ್ಟೆಂಬರ್ 2025, 15:32 IST
ಶುಕ್ರವಾರ  ಭಾರಿ ಮಳೆಯಿಂದಾಗಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್‌ ರಸ್ತೆ ಜಲಾವೃತಗೊಂಡಿತ್ತು. 
ಶುಕ್ರವಾರ  ಭಾರಿ ಮಳೆಯಿಂದಾಗಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್‌ ರಸ್ತೆ ಜಲಾವೃತಗೊಂಡಿತ್ತು.    

ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸತತ ಮೂರನೇ ದಿನವೂ ಮಳೆ ಮುಂದುವರಿದಿದೆ.

ಕಲಬುರಗಿ ನಗರ, ಜಿಲ್ಲೆಯ ಕಾಳಗಿ, ಜೇವರ್ಗಿ, ಚಿತ್ತಾಪುರ ತಾಲ್ಲೂಕಿನ ಹಲವೆಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿಯಿತು. ಹವಾಮಾನ ಇಲಾಖೆ ಜಿಲ್ಲೆಗೆ ಶನಿವಾರ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಬೀದರ್‌ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಧ್ಯಾಹ್ನದವರೆಗೆ ವರ್ಷಧಾರೆಯಾಗಿದೆ. ಬೀದರ್‌, ಹುಲಸೂರ, ಭಾಲ್ಕಿ, ಹುಮನಾಬಾದ್‌ ಹಾಗೂ ಚಿಟಗುಪ್ಪ ತಾಲ್ಲೂಕು ವ್ಯಾಪ್ತಿಯಲ್ಲೂ ಮಳೆ ಬಿದ್ದಿದೆ.

ADVERTISEMENT

ಯಾದಗಿರಿ, ಶಹಾಪುರ, ಸುರಪುರ, ಕೆಂಭಾವಿ, ವಡಗೇರಾ, ಗುರುಮಠಕಲ್, ಹುಣಸಗಿ ಹಾಗೂ ಕೊಪ್ಪಳ, ರಾಯಚೂರು ಜಿಲ್ಲೆಯ ದೇವದುರ್ಗ, ಮಾನ್ವಿ ಹಾಗೂ ಸಿರವಾರದಲ್ಲಿ ವರ್ಷಧಾರೆಯಾಗಿದೆ.

ಧಾರವಾಡ, ಬೆಳಗಾವಿ ಜಿಲ್ಲೆಯಲ್ಲೂ ಮಳೆ:

ಹುಬ್ಬಳ್ಳಿ ನಗರ, ಗ್ರಾಮೀಣ ಪ್ರದೇಶ ಸೇರಿದಂತೆ ಧಾರವಾಡ ಹಾಗೂ ಸುತ್ತಮುತ್ತ ಶುಕ್ರವಾರ ಧಾರಾಕಾರ ಮಳೆಯಾಗಿದೆ.  ಕೆಎಂಸಿ–ಆರ್‌ಐ ಆಸ್ಪತ್ರೆಯ ಬಿಆರ್‌ಟಿಎಸ್‌ ಬಸ್‌ ನಿಲ್ದಾಣದ ಕಾರಿಡಾರ್‌ ಜಲಾವೃತಗೊಂಡಿತ್ತು. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರು ತುಸು ನಿರಾಳರಾದರು.

ಬೆಳಗಾವಿ ನಗರ ಹಾಗೂ ತಾಲ್ಲೂಕಿನ ವಿವಿಧೆಡೆಯೂ ಸಾಧಾರಣ ಮಳೆ ಸುರಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.