ADVERTISEMENT

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಂಪುಟ ಸಭೆ ತೀರ್ಮಾನ; ಎಚ್‌.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 15:23 IST
Last Updated 16 ಸೆಪ್ಟೆಂಬರ್ 2025, 15:23 IST
ಎಚ್‌.ಕೆ.ಪಾಟೀಲ
ಎಚ್‌.ಕೆ.ಪಾಟೀಲ   

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂಬ ಆ ಭಾಗದ ಜನರ ಬೇಡಿಕೆಗೆ ಪೂರಕವಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಈ ಸಚಿವಾಲಯದ ವ್ಯಾಪ್ತಿಗೆ ಬರಲಿವೆ. ಇದರ ಕೇಂದ್ರ ಕಚೇರಿ ಎಲ್ಲಿರಬೇಕು? ಮತ್ತಿತ್ತರ ಅಂಶಗಳನ್ನು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT