ಮಹೇಶ್ ಜೋಶಿ
ಬೆಂಗಳೂರು: ‘ಕಮಲ್ ಹಾಸನ್ ನಟಿಸಿರುವ ಥಗ್ ಲೈಫ್ ಚಲನಚಿತ್ರದ ಬಿಡುಗಡೆಗೆ ರಾಜ್ಯದಲ್ಲಿ ಭದ್ರತೆ ನೀಡಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ರಾಜ್‌ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ಸಂಸ್ಥೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನನ್ನನ್ನೂ ಮಧ್ಯಂತರ ಅರ್ಜಿದಾರರಾಗಿ ಸೇರ್ಪಡೆ ಮಾಡಿಕೊಳ್ಳಬೇಕು’ ಎಂದು ಕೋರಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ರಾಜ್‌ಕಮಲ್ ಫಿಲ್ಮ್ಸ್‌ಇಂಟರ್ ನ್ಯಾಷನಲ್ ಸಂಸ್ಥೆ ಸಲ್ಲಿಸಿರುವ ರಿಟ್ ಅರ್ಜಿ ಇದೇ 10ಕ್ಕೆ ವಿಚಾರಣೆಗೆ ನಿಗದಿಯಾಗಿದ್ದು ಈ ಅರ್ಜಿಯ ಜೊತೆಯಲ್ಲಿ ಮಧ್ಯಂತರ ಅರ್ಜಿಯ ಮನವಿ ಸ್ವೀಕೃತಿ ಬಗ್ಗೆ ತೀರ್ಮಾನವಾಗಲಿದೆ.
‘ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಅಹಿತಕರ ಹೇಳಿಕೆ ನೀಡಿದ್ದಾರೆ. ಕ್ಷಮೆ ಕೋರಲು ನಿರಾಕರಿಸಿ ಅಹಂಕಾರ ಮೆರೆದಿದ್ದಾರೆ. ಕನ್ನಡ ಭಾಷೆ-ಸಂಸ್ಕೃತಿಯ ಇತಿಹಾಸ ಘನತೆ ಮತ್ತು ಗುರುತನ್ನು ಸಂರಕ್ಷಿಸುವ ವಿಚಾರದಲ್ಲಿ ಪರಿಷತ್ತು ತನ್ನ ವಾದ ಮಂಡಿಸಲು ಅವಕಾಶ ಕಲ್ಪಿಸಬೇಕು’ ಎಂದು ಜೋಶಿ ತಮ್ಮ ಮಧ್ಯಂತರ ಅರ್ಜಿಯಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.