ಡಾ.ಸಿ.ಎನ್.ಮಂಜುನಾಥ್
ನವದೆಹಲಿ: ‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆನೆಗಳ ಹಾವಳಿ ವ್ಯಾಪಕವಾಗಿದೆ. ಬನ್ನೇರುಘಟ್ಟ, ಸಾತನೂರು ಮತ್ತಿತರ ಕಡೆಗಳಲ್ಲಿ ಆನೆ ದಾಳಿಗಳಿಂದ ಮನುಷ್ಯರು ಮೃತಪಟ್ಟಿದ್ದಾರೆ. ಕೃಷಿ ನಷ್ಟ ಅಪಾರವಾಗಿದೆ. ಬ್ಯಾರಿಕೇಡ್ ಅಳವಡಿಕೆಗೆ ಕಾಂಪಾ ನಿಧಿಯಿಂದ ವಿಶೇಷ ಅನುದಾನ ನೀಡಬೇಕು’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಆಗ್ರಹಿಸಿದರು.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಕಾಡು ಪ್ರಾಣಿಗಳ ದಾಳಿಯಿಂದ ಅರಣ್ಯ ಇಲಾಖೆಯವರು ಮೃತಪಟ್ಟರೆ ₹25 ಲಕ್ಷ ಪರಿಹಾರ ನೀಡಲಾಗುತ್ತದೆ. ರೈತರಿಗೆ ₹15 ಲಕ್ಷವಷ್ಟೇ ಪರಿಹಾರ ಒದಗಿಸಲಾಗುತ್ತದೆ. ಈ ತಾರತಮ್ಯ ಸರಿಯಲ್ಲ. ಪರಿಹಾರವನ್ನು ₹25 ಲಕ್ಷಕ್ಕೆ ಏರಿಸಬೇಕು’ ಎಂದು ಅವರು ಒತ್ತಾಯಿಸಿದರು.
ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅರಣ್ಯ ಸಚಿವ ಭೂಪೇಂದರ್ ಯಾದವ್ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.