ADVERTISEMENT

ಕನಕಪುರ, ವರುಣ ಕ್ಷೇತ್ರದಲ್ಲಿ ಬಿ. ಎಲ್ ಸಂತೋಷ್, ಜೋಶಿ ಸ್ಪರ್ಧಿಸಲಿ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಏಪ್ರಿಲ್ 2023, 9:58 IST
Last Updated 12 ಏಪ್ರಿಲ್ 2023, 9:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕನಕಪುರ ಹಾಗೂ ವರುಣ ಕ್ಷೇತ್ರದಲ್ಲಿ ಬಿ. ಎಲ್ ಸಂತೋಷ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಸ್ಪರ್ಧೆಗೆ ಆಹ್ವಾನಿಸುತ್ತೇವೆ. ಪಂಥಾಹ್ವಾನ ಸ್ವೀಕರಿಸುವರೇ? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಟೀಕಿಸಿದೆ.

ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾಗಪುರದ ವಂಶದವರು ಇತರರನ್ನು ಹೊಂಡಕ್ಕೆ ತಳ್ಳಿ, ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ ಎಂದಿದೆ. ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ ಎಂದು ತಿಳಿಸಿದೆ.

ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದಲ್ಲೇ ಗಡಿಪಾರು ಆಗಿದ್ದ, ಅನ್ನಭಾಗ್ಯದ ಅಕ್ಕಿ ಕಳ್ಳಸಾಗಣೆಯ ಆರೋಪಿ, ರೌಡಿ ಶೀಟರ್‌ ಮಣಿಕಂಠ ರಾಠೋಡಗೆ ಟಿಕೆಟ್ ಕೊಡುವ ಮೂಲಕ ಬಿಜೆಪಿ ರೌಡಿ ಮೋರ್ಚಾಕ್ಕೂ ಮನ್ನಣೆ ನೀಡಿದೆ. ಬಿಜೆಪಿಯ ಟಿಕೆಟ್‌ಗೆ 'ಗಡಿಪಾರು' ಆಗಿರುವುದೇ ಬಹುಮುಖ್ಯ ಮಾನದಂಡ ಎಂಬುದನ್ನು ದೆಹಲಿನಿಂದ ಇಲ್ಲಿಯವರೆಗೆ ನಿರೂಪಿಸಿದೆ ಎಂದು ಕುಟುಕಿದೆ.

ADVERTISEMENT

ಕೆಲವು ಹಿರಿಯ ನಾಯಕರಿಗೆ ಕೊಕ್‌ ಕೊಟ್ಟಿರುವ ಬಿಜೆಪಿ, ಹೊಸ ಮುಖಗಳಿಗೆ ಮಣೆ ಹಾಕಿದೆ. ಇದರಿಂದ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯಗಳಿಗೆ ಕಾರಣವಾಗಬಹುದು.

ಬಿಜೆಪಿ ಮಂಗಳವಾರ 189 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.