ADVERTISEMENT

‘ಕನಕಶ್ರೀ’ ಪ್ರಶಸ್ತಿ: ರವೀಂದ್ರ ಭಟ್ಟ, ಪ್ರೊ.ಜಿ.ಹೇಮಂತಕುಮಾರ್‌ ಆಯ್ಕೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 23:13 IST
Last Updated 2 ಡಿಸೆಂಬರ್ 2020, 23:13 IST
ರವೀಂದ್ರ ಭಟ್ಟ ಮತ್ತು ಪ್ರೊ.ಜಿ.ಹೇಮಂತ ಕುಮಾರ್‌
ರವೀಂದ್ರ ಭಟ್ಟ ಮತ್ತು ಪ್ರೊ.ಜಿ.ಹೇಮಂತ ಕುಮಾರ್‌   

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್‌ ಮತ್ತು ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮತ್ತು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ನೀಡುವ ರಾಜ್ಯಮಟ್ಟದ ‘ಕನಕಶ್ರೀ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕ ಹೊಂದಿದೆ. ಡಿ.4ರಂದು ಬೆಳಿಗ್ಗೆ 10.30ಕ್ಕೆ ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಧಾನ
ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಷ್ಟ್ರಿಯ ಕಾರ್ಯದರ್ಶಿ ಸುಭಾಷ್‌ ಎಚ್‌.ಕಾನಡೆ ಪಾಲ್ಗೊಳ್ಳುವರು ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್‌.ಶಿವರಾಮು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT