ಬೆಂಗಳೂರು: ಅನುದಾನ ಬಳಕೆಗೆ ಸಂಬಂಧಿಸಿದಂತೆ ಲೆಕ್ಕಪರಿಶೋಧನೆ ವರದಿ ಸಲ್ಲಿಕೆ ಸೇರಿ ವಿವಿಧ ಷರತ್ತುಗಳೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ಸಾಹಿತ್ಯ ಪರಿಷತ್ತಿಗೆ (ಕಸಾಪ) ₹ 1.01 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಈ ಬಗ್ಗೆ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪರಿಷತ್ತಿನ ಸಿಬ್ಬಂದಿಗೆ ಆರು ತಿಂಗಳ ವೇತನ ಪಾವತಿಗೆ ಈ ಅನುದಾನ ಬಳಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಕಸಾಪ 2025–26ನೇ ಸಾಲಿನ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಈ ಅನುದಾನವನ್ನು ಸಿಬ್ಬಂದಿ ವೇತನಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು. ಈ ಹಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗೆ ಲೆಕ್ಕಪರಿಶೋಧನೆ ವರದಿಯನ್ನು ಇಲಾಖೆಗೆ ಸಲ್ಲಿಸಬೇಕು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.