ADVERTISEMENT

‘ಕನಕ ಶ್ರೀ ಪ್ರಶಸ್ತಿ’ ಪ್ರದಾನ ಇಂದು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 22:25 IST
Last Updated 2 ಡಿಸೆಂಬರ್ 2020, 22:25 IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನಕದಾಸ ಜಯಂತಿ ಕಾರ್ಯಕ್ರಮವನ್ನು ಗುರುವಾರ (ಡಿ.3) ಬೆಳಿಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದು, ದಾವಣಗೆರೆಯ ಯುಗಧರ್ಮ ರಾಮಣ್ಣ ಅವರಿಗೆ 2020ನೇ ಸಾಲಿನ ‘ಕನಕ ಶ್ರೀ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗುತ್ತದೆ.

ಕಲಬುರ್ಗಿ ವಿಭಾಗದ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಪ್ರೊ.ಬಿ. ಶಿವರಾಮ ಶೆಟ್ಟಿ ಹಾಗೂ ಹಾವೇರಿಯ ಡಾ. ಶಶಿಧರ್ ಜಿ. ವೈದ್ಯ ಅವರಿಗೆ ‘ಕನಕ ಗೌರವ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುತ್ತದೆ. ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಬೆಂಗಳೂರಿನ ಡಾ. ನರಸಿಂಹಮೂರ್ತಿ ಹೂವಿನಹಳ್ಳಿ ಅವರಿಗೆ ‘ಕನಕ ಯುವ ಪುರಸ್ಕಾರ’ ನೀಡಿ ಗೌರವಿಸಲಾಗುತ್ತದೆ.

‘ಕನಕ ಶ್ರೀ’ ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಫಲಕವನ್ನು ಒಳಗೊಂಡಿದೆ. ‘ಕನಕ ಗೌರವ ಪ್ರಶಸ್ತಿ’ಯು ₹ 75 ಸಾವಿರ ನಗದು ಹಾಗೂ ಫಲಕ, ‘ಕನಕ ಯುವ ಪುರಸ್ಕಾರ’ವು ₹ 50 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.