ADVERTISEMENT

ಮೂವರಿಗೆ ‘ಚಿದಾನಂದಮೂರ್ತಿ ಕನ್ನಡ ಸಂಸ್ಕೃತಿ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 20:02 IST
Last Updated 19 ನವೆಂಬರ್ 2022, 20:02 IST
   

ಬೆಂಗಳೂರು: ಕನ್ನಡ ಗೆಳೆಯರ ಬಳಗ ನೀಡುವ‘ಚಿದಾನಂದಮೂರ್ತಿ ಕನ್ನಡ ಸಂಸ್ಕೃತಿ ಪ್ರಶಸ್ತಿ’ಗೆಪ್ರೊ. ಲಕ್ಷ್ಮಣ ತೆಲಗಾವಿ, ದೇವರ ಕೊಂಡಾರೆಡ್ಡಿ ಹಾಗೂ ಎಚ್.ಎಸ್. ಗೋಪಾಲರಾವ್ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯು ತಲಾ ₹ 5 ಸಾವಿರ ನಗದು ಒಳಗೊಂಡಿದೆ. ಕೋವಿಡ್ ಕಾರಣ ಕಳೆದ ಎರಡು ವರ್ಷ ಈ ಪ್ರಶಸ್ತಿ ನೀಡಿರಲಿಲ್ಲ. ಚಿತ್ರದುರ್ಗದ ಲಕ್ಷ್ಮಣ ತೆಲಗಾವಿ ಅವರು ಇತಿಹಾಸ ತಜ್ಞರು ಹಾಗೂ ದೇವರಕೊಂಡಾ ರೆಡ್ಡಿ ಕನ್ನಡ ವಿದ್ವಾಂಸರು. ಇವರಿಬ್ಬರೂ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದರು.ಎಚ್.ಎಸ್. ಗೋಪಾಲರಾವ್ ಅವರು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ ಎಂದು ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ ತಿಳಿಸಿದ್ದಾರೆ.

ಡಿ.12ರಂದು ಶೇಷಾದ್ರಿಪುರ ಕಾಲೇಜಿನ ಸಭಾಂಗಣದಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ. ಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯಸಭೆ ಸದಸ್ಯ ಎಲ್. ಹನುಮಂತಯ್ಯ ಹಾಗೂ ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.