ಈಶ್ವರ ಖಂಡ್ರೆ
ಬೆಂಗಳೂರು: 'ಪರಿಸರ ಕಾಯಿದೆ ಉಲ್ಲಂಘನೆ ಹಿನ್ನಲೆಯಲ್ಲಿ 'ಬಿಗ್ ಬಾಸ್ ಸೀಸನ್ 12' ಮುಚ್ಬಲು ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ' ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, 'ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಪರಿಸರ ಕಾಯಿದೆ ಉಲ್ಲಂಘಿಸಿದರೆ ಕ್ರಮ ಅನಿವಾರ್ಯ' ಎಂದಿದ್ದಾರೆ.
'ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ವೆಲ್ಸ್ ಸ್ಟುಡಿಯೋಸ್ ಅಂಡ್ ಎಂಟರ್‌ಟೈನ್ಮೆಂಟ್ ಪ್ರೈ. ಲಿ. (ಜಾಲಿವುಡ್ ಸ್ಟುಡಿಯೋ) ಸಂಸ್ಥೆಗೆ ಜಲ ಕಾಯಿದೆ ಹಾಗೂ ವಾಯು ಕಾಯಿದೆಯಡಿ ಅಗತ್ಯ ಅನುಮತಿಗಳನ್ನು ಪಡೆಯದೆ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ' ಎಂದು ತಿಳಿಸಿದ್ದಾರೆ.
'ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿರುವ ಈ ಸ್ಟುಡಿಯೋಗೆ ಮಂಡಳಿ ಈಗಾಗಲೇ ಎರಡು ಬಾರಿ ನೋಟಿಸ್ ನೀಡಿದ್ದರೂ ಅನುಪಾಲನೆ ಆಗದ ಕಾರಣ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಎಸ್.ಟಿ.ಪಿ. ಸರಿಯಾಗಿ ಕಾರ್ಯನಿರ್ವಹಿಸದಿರುವುದು, ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿಲ್ಲದಿರುವುದು ಹಾಗೂ ಜನರೇಟರ್‌ಗಳಿಗೂ ಅಗತ್ಯ ಅನುಮತಿ ಇಲ್ಲದಿರುವುದು ಗಮನಕ್ಕೆ ಬಂದಿದೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.