ADVERTISEMENT

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ; ಸಿದ್ಧಲಿಂಗಯ್ಯ ಪಂಚಭೂತಗಳಲ್ಲಿ ಲೀನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 8:11 IST
Last Updated 12 ಜೂನ್ 2021, 8:11 IST
   

ಬೆಂಗಳೂರು:ದಲಿತ ಕವಿ, ದಮನಿತರ ಧ್ವನಿಯಾಗಿದ್ದ ಸಿದ್ಧಲಿಂಗಯ್ಯ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ಶನಿವಾರ ನೆರವೇರಿತು.

ಬೌದ್ಧ ಬಿಕ್ಕುಗಳ ನೇತೃತ್ವದಲ್ಲಿ ಬೌದ್ಧ ಧರ್ಮದ ವಿಧಿ ವಿಧಾನದಂತೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಬೌದ್ಧ ಪಥದ ಸಾಲುಗಳನ್ನು ಪಠಿಸಲಾಯಿತು. ಮಗ ಗೌತಮ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಪತ್ನಿ ರಮಾ, ಮಗಳು ಮಾನಸ, ಅಳಿಯ ಗಿರಿ ಇದ್ದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಸರ್ಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದರು. ಶಾಸಕ ಮುನಿರತ್ನ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.