ಬೆಂಗಳೂರು: ‘ಎಲ್ಲ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಂಪ್ಯೂಟರ್ಗಳಲ್ಲಿ ಕನ್ನಡ ಕಲಿಕೆಯ ತರಬೇತಿ ನೀಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಆಗ್ರಹಿಸಿದ್ದಾರೆ.
ಈ ಬಗ್ಗೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ‘ಈ ಹಿಂದೆ ಸರ್ಕಾರ ಹೊರಡಿಸಿದ ಆದೇಶವೊಂದರಲ್ಲಿ ಕನ್ನಡದ ಪದಗಳನ್ನು ತಪ್ಪಾಗಿ ಬರೆಯಲಾಗಿತ್ತು. ಆದ್ದರಿಂದ ಆಗಸ್ಟ್ ಮೊದಲ ವಾರದಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಬೇಕು. ಈ ಸಂಬಂಧ ಸಚಿವಾಲಯದ ತರಬೇತಿ ಸಂಸ್ಥೆಗೂ ನಿರ್ದೇಶನ ನೀಡಬೇಕು’ ಎಂದು ಹೇಳಿದ್ದಾರೆ.
‘ಪ್ರಾಧಿಕಾರದ ವತಿಯಿಂದ ಕರ್ನಾಟಕ ಗಣಕ ಪರಿಷತ್ತಿನ ಕಾರ್ಯದರ್ಶಿ ಜಿ.ಎನ್. ನರಸಿಂಹಮೂರ್ತಿ ಅವರನ್ನು ಸಂಪನ್ಮೂಲ ವ್ಯಕ್ತಿಯಾಗಿ ನಿಯೋಜಿಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.