ADVERTISEMENT

ಕೇಂದ್ರೀಯ ವಿದ್ಯಾಲಯದಲ್ಲೂ ಕನ್ನಡ ಕಲಿಕೆ: ಸಚಿವರ ಪತ್ರ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 19:30 IST
Last Updated 19 ನವೆಂಬರ್ 2019, 19:30 IST

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಸಿಬಿಎಸ್ಇ, ಐಸಿಎಸ್ಇ ಶಾಲೆಗಳು ಹಾಗೂ ಕೇಂದ್ರೀಯ ವಿದ್ಯಾಲಯಗಳು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುವ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಒಂದೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಿದ್ದಾರೆ.

ನಗರದಲ್ಲಿ ಈಚೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಜತೆಗೆ ನಡೆಸಿದ ಸಭೆಯಲ್ಲಿ ಸಚಿವರು ಈ ಬಗ್ಗೆ ಮೌಖಿಕ ಸೂಚನೆ ನೀಡಿದ್ದರು. ಸಚಿವರ ಈ ಹೇಳಿಕೆಗೆ ಖಾಸಗಿ ಶಾಲೆಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT