ADVERTISEMENT

‘ಶಾಸ್ತ್ರೀಯ ಭಾಷಾ ಕೇಂದ್ರಕ್ಕೆ ಮೈಸೂರು ವಿ.ವಿ.ಯಲ್ಲಿ 5 ಎಕರೆ ಜಾಗ’

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 19:17 IST
Last Updated 1 ನವೆಂಬರ್ 2019, 19:17 IST

ಚಿಕ್ಕಮಗಳೂರು: ‘ಮೈಸೂರು ವಿಶ್ವವಿದ್ಯಾಲಯದ ಐದು ಎಕರೆ ಜಾಗದಲ್ಲಿ ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಸ್ಥಾಪಿಸಲು ತೀರ್ಮಾನಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದರು.

‘ಮೈಸೂರು ವಿ.ವಿ ಕಟ್ಟಡವೊಂದರಲ್ಲಿ ಸದ್ಯಕ್ಕೆ ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರ ಆರಂಭಿಸುವ, ಕೇಂದ್ರ ಸರ್ಕಾರ ನೀಡುವ ₹ 150 ಕೋಟಿ ಅನುದಾನ ಸಮರ್ಪಕ ಬಳಕೆಗೆ ರೂಪುರೇಷೆ ಸಿದ್ಧಪಡಿಸುವ ಕಾರ್ಯ ಶುರುವಾಗಿದೆ’ ಎಂದು ರಾಜ್ಯೋತ್ಸವ ಭಾಷಣದಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT