ADVERTISEMENT

ಯಾವುದೇ ಪಠ್ಯಕ್ರಮವಾದರೂ ಕನ್ನಡ ಕಲಿಕೆ ಕಡ್ಡಾಯ: ಎಸ್. ಸುರೇಶ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 8:18 IST
Last Updated 15 ಜುಲೈ 2021, 8:18 IST
ಎಸ್. ಸುರೇಶ್‌ಕುಮಾರ್
ಎಸ್. ಸುರೇಶ್‌ಕುಮಾರ್   

ಬೆಂಗಳೂರು: ‘ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ. ಈ ಕುರಿತು ರಾಜ್ಯಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ಹೇಳಿದ್ದಾರೆ.

‘ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

‘ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ವಿರೋಧಿಸುತ್ತಿರುವ ಹೊರ ರಾಜ್ಯದ ಪೋಷಕರ ಒಂದು ವರ್ಗ, ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದೆ. ಇದು ಕಾಯ್ದೆಗೆ ವಿರುದ್ಧವಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಅಂಥವರ ಆಗ್ರಹಕ್ಕೂ ಮಣಿಯದೇ ಕಡ್ಡಾಯವಾಗಿ ಕನ್ನಡ ಕಲಿಸಬೇಕು’ ಎಂದೂ ಅವರು ಸೂಚನೆ ನೀಡಿದ್ದಾರೆ.

ADVERTISEMENT

ಪೋಷಕರ ಇಂತಹ ನಡೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಸಚಿವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.