ADVERTISEMENT

ಕನ್ನಡಕ್ಕೆ ದೀರ್ಘ ಇತಿಹಾಸವಿದೆ, ಪಾಪ ಕಮಲ್ ಹಾಸನ್‌ಗೆ ಗೊತ್ತಿಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಮೇ 2025, 9:19 IST
Last Updated 28 ಮೇ 2025, 9:19 IST
<div class="paragraphs"><p>ಸಿದ್ದರಾಮಯ್ಯ ಮತ್ತು&nbsp;ಕಮಲ್ ಹಾಸನ್</p></div>

ಸಿದ್ದರಾಮಯ್ಯ ಮತ್ತು ಕಮಲ್ ಹಾಸನ್

   

ಬೆಂಗಳೂರು: ‘ಕನ್ನಡ ತಮಿಳಿನಿಂದ ಹುಟ್ಟಿರುವುದು’ ಎಂದು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕನ್ನಡಕ್ಕೆ ದೀರ್ಘ ಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್‌ ಅವರಿಗೆ ಗೊತ್ತಿಲ್ಲ’ ಎಂದು ಕಿಡಿಕಾರಿದ್ದಾರೆ.

ADVERTISEMENT

ಕನ್ನಡದ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ.

ಈಚೆಗೆ ಚೆನ್ನೈನಲ್ಲಿ ನಡೆದ ‘ಥಗ್ ಲೈಫ್’ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ಮಾತನಾಡಿದ್ದರು. ಇದೇ ವೇಳೆ ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ಹೇಳಿದ್ದರು. ಕಮಲ್ ಹಾಸನ್ ನೀಡಿರುವ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಚಿತ್ರರಂಗಕ್ಕೆ ರಾಜ್‌ಕುಮಾರ್‌ ಕುಟುಂಬ, ಶಿವರಾಜ್‌ಕುಮಾರ್‌ ಕೊಡುಗೆಗಳನ್ನು ಶ್ಲಾಘಿಸಿದ್ದ ಕಮಲ್ ಹಾಸನ್, ರಾಜ್‌ಕುಮಾರ್‌ ಕುಟುಂಬದ ಜತೆಗಿನ ಒಡನಾಟವನ್ನು‌ ನೆನಪಿಸಿಕೊಂಡಿದ್ದರು. ನಟ ಶಿವರಾಜ್ ಕುಮಾರ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಅವರ ಎದುರೇ ಕನ್ನಡವನ್ನು ತಮಿಳಿನೊಂದಿಗೆ ಹೋಲಿಸಿರುವುದು ವಿವಾದಕ್ಕೆ ಗುರಿಯಾಗಿದೆ.

ಮಣಿರತ್ನಂ ನಿರ್ದೇಶನದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಜೂನ್ 5ರಂದು ತೆರೆ ಕಾಣುತ್ತಿದೆ. ಅದರ ಪ್ರಚಾರ ಕಾರ್ಯಕ್ಕಾಗಿ ಕಮಲ್ ಹಾಸನ್ ಮತ್ತು ಚಿತ್ರತಂಡ ಮಂಗಳವಾರ ಬೆಂಗಳೂರಿಗೆ ಬಂದಿತ್ತು. ಇದರ ಬೆನ್ನಲ್ಲೇ ಅವರು ಶನಿವಾರ ಮಾತನಾಡಿದ ವಿಡಿಯೊ ಹರಿದಾಡಿದ್ದು, ವಿವಾದ ಸೃಷ್ಟಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.