
ಪ್ರಜಾವಾಣಿ ವಾರ್ತೆ
ಜಮೀರ್ ಅಹಮದ್ ಖಾನ್
ಹೊಸಪೇಟೆ (ವಿಜಯನಗರ): ‘ರಾಜ್ಯದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು ಎಂಬ ಉದ್ದೇಶದಿಂದ ಎಲ್ಲ ಮದರಸ ಮತ್ತು ಉರ್ದು ಶಾಲೆಗಳಲ್ಲಿ ಕನ್ನಡ ಕಲಿಕೆ ಆರಂಭಿಸಲಾಗಿದೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಇಲ್ಲಿ ಶನಿವಾರ ಹೇಳಿದರು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು,‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯಂತೆ ಮದರಸಗಳಲ್ಲಿ 90 ದಿನದಲ್ಲಿ ಕನ್ನಡ ಕಲಿಸುವ ಯೋಜನೆ ಆರಂಭವಾಗಿದೆ. ಉರ್ದು ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆ ಕಲಿಸಲು ಆದೇಶಿಸಿದೆ’ ಎಂದರು.
‘ರಾಜ್ಯದಲ್ಲಿ ಮುಂದಿನ ವರ್ಷದೊಳಗೆ ವಸತಿರಹಿತರಿಗೆ 2.30 ಲಕ್ಷ ಮನೆ, ಬೆಂಗಳೂರಿನಲ್ಲಿ 12 ಸಾವಿರ ಮಂದಿಗೆ ಸೂರು ಒದಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.