ADVERTISEMENT

ಮಂಥನ: ಕನ್ನಡ ಕಡೆಗಣನೆಗೆ ನಾಗಾಭರಣ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 18:20 IST
Last Updated 9 ಸೆಪ್ಟೆಂಬರ್ 2022, 18:20 IST
ನಾಗಾಭರಣ
ನಾಗಾಭರಣ    

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಹಾಗೂಭೂ ಹೆದ್ದಾರಿ ಇಲಾಖೆ ನಗರದಲ್ಲಿ ಆಯೋಜಿಸಿದ್ದ ಮಂಥನ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಕನ್ನಡ ಕಡೆಗಣಿಸಿರುವುದಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿದೆ.

ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರುಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿವಂದಿತಾ ಶರ್ಮಾ ಅವರಿಗೆ ಪತ್ರ ಬರೆದಿದ್ದಾರೆ. ‘ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರ ಆದೇಶ ಹೊರಡಿಸಿ ಎರಡು ದಿನಗಳಾಗಿವೆ.ಅದಾಗಲೇಲೋಕೋಪಯೋಗಿ ಇಲಾಖೆ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿದೆ. ಆದ್ದರಿಂದ ಕನ್ನಡ ಕಡೆಗಣಿಸಿದವರಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT