ಬೆಳಗಾವಿ/ ಮೋಳೆ: ಜಿಲ್ಲೆಯ ಗಡಿಯಲ್ಲಿರುವ ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದೆ.
ಕನ್ನಡ ರಾಜ್ಯೋತ್ಸವ ವಿರೋಧಿಸಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಮುಖಂಡರಿಗೆ ಈ ಬಾರಿ ಕರಾಳ ದಿನಾಚರಣೆ ನಡೆಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ.
ತಾಲ್ಲೂಕು ಆಡಳಿತ ಮತ್ತು ಪೋಲೀಸರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದಾಗಿ, ಕನ್ನಡಿಗರು ಅಂಗಡಿ ಮತ್ತು ಮನೆಗಳ ಎದುರು ರಂಗೋಲಿ ಬಿಡಿಸಿ ಶುಭಾಶಯ ಕೋರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಎಸ್ಪಿ ಲಕ್ಷ್ಮಣ ನಿಂಬರಗಿ ನಿರ್ದೇಶನದ ಮೇರೆಗೆ ಅಥಣಿ ಸಿಪಿಐ ಶಂಕರಗೌಡ ಪಾಟೀಲ ಮತ್ತು ಕಾಗವಾಡ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಗ್ರಾಮಕ್ಕೆ ತೆರಳಿ ಕರಾಳ ದಿನ ಆಚರಿಸದಂತೆ ಎಂಇಎಸ್ ಮುಖಂಡರಿಗೆ ಎಚ್ಚರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.