ADVERTISEMENT

ಕಲಬುರ್ಗಿಗೆ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 16:06 IST
Last Updated 5 ಜನವರಿ 2019, 16:06 IST
ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆ– ಸಾಂದರ್ಭಿಕ ಚಿತ್ರ
ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆ– ಸಾಂದರ್ಭಿಕ ಚಿತ್ರ   

ಧಾರವಾಡ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಲಬುರ್ಗಿಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರೀಯ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ.

1987ರ ನಂತರ ಕಲಬುರ್ಗಿಗೆ ಸಮ್ಮೇಳನ ಆತಿಥ್ಯ ವಹಿಸುವ ಅವಕಾಶ ದೊರೆತಿದ್ದು, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಸಜ್ಜಾಗಲಿದೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಶನಿವಾರ ರಾತ್ರಿ ನಡೆದ ಪರಿಷತ್ತಿನ ಕಾರ್ಯಕಾರಿ41 ಸದಸ್ಯರ ಸಮಿತಿ ಸಭೆಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನದ ಆತಿಥ್ಯ ನೀಡುವ ಕುರಿತು ಚರ್ಚೆ ನಡೆಯಿತು. ಕಲಬುರ್ಗಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸಬೇಕೆಂಬ ಪ್ರಸ್ತಾವಕ್ಕೆ ಸರ್ವಾನುಮತದ ಅನುಮೋದನೆ ನೀಡಲಾಯಿತು. ಬಳಿಕ ಮನು ಬಳಿಗಾರ್ ಈ ವಿಷಯ ಪ್ರಕಟಿಸಿದರು.

ADVERTISEMENT

ಕಲಬುರ್ಗಿ, ದಾವಣಗೆರೆ, ಚಾಮರಾಜನಗರ, ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಬೀದರ್‌, ಬಳ್ಳಾರಿ, ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಲು ಅವಕಾಶ ನೀಡುವಂತೆ ಬೇಡಿಕೆ ಬಂದಿತ್ತು. ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕಗಳ ಅಧ್ಯಕ್ಷರುಗಳು ಸಭೆಯಲ್ಲಿ ಹಾಜರಿದ್ದು, ಪ್ರಸ್ತಾವ ಮಂಡಿಸಿದರು. ಅಂತಿಮವಾಗಿ ಕಲಬುರ್ಗಿ ಜಿಲ್ಲೆಯಲ್ಲಿ ನಡೆಸುವ ಪ್ರಸ್ತಾವಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಯಿತು. ಬಳಿಕ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

* ಈ ಹಿಂದೆ ಕಲಬುರ್ಗಿಯಲ್ಲಿ ನಡೆದಿರುವ ಸಾಹಿತ್ಯ ಸಮ್ಮೇಳನ ಹಾಗೂ ಅಧ್ಯಕ್ಷರು

1928ರಲ್ಲಿ ಬಿಎಂಶ್ರೀ
1949ರಲ್ಲಿ ಉತ್ತಂಗಿ ಚನ್ನಪ್ಪ
1987ರಲ್ಲಿ ಸಿದ್ದಯ್ಯ ಪುರಾಣಿಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.