
ಪ್ರಜಾವಾಣಿ ವಾರ್ತೆಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2020–21ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಜ.8ರಿಂದ ಜ.10ರವರೆಗೆ ನಡೆಯಲಿವೆ.
ಪರೀಕ್ಷೆಗಳಿಗೆ ರಾಜ್ಯದ 19 ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆಗಳ ಮೂಲಕ ಕಳುಹಿಸಲಾಗಿದೆ. 2020ರ ಡಿ.30ರ ಬಳಿಕವೂ ಪ್ರವೇಶ ಪತ್ರ ತಲುಪದಿದ್ದಲ್ಲಿ ಪರಿಷತ್ತಿನ ಕೇಂದ್ರ ಕಚೇರಿಯ ಗೌರವ
ಕಾರ್ಯದರ್ಶಿಗಳನ್ನು ವಿಚಾರಿಸಬೇಕು. ಜಿಲ್ಲೆಗಳಲ್ಲಿ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಸಿಗದಿದ್ದರೂ ನೇರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬಹುದು. ಮಾಹಿತಿಯನ್ನು 080 26623584ಕ್ಕೆ ಕರೆ ಮಾಡಿ, ಪಡೆಯಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.