ADVERTISEMENT

ಸರೋಜಾದೇವಿಗೆ ‘ರಾಜಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 16:14 IST
Last Updated 8 ಏಪ್ರಿಲ್ 2022, 16:14 IST
ಬಿ. ಸರೋಜಾ ದೇವಿ
ಬಿ. ಸರೋಜಾ ದೇವಿ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ನಟಿ ಬಿ. ಸರೋಜಾದೇವಿ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಹೊನ್ನಪ್ಪ ಭಾಗವತ ಅವರ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ 1955 ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಬಿ. ಸರೋಜಾದೇವಿ ಅವರು,ಡಾ. ರಾಜಕುಮಾರ್, ಕಲ್ಯಾಣಕುಮಾರ್, ಉದಯಕುಮಾರ್, ಎ. ನಾಗೇಶ್ವರರಾವ್, ಎನ್.ಟಿ. ರಾಮರಾವ್, ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಎಂ.ಜಿ. ರಾಮಚಂದ್ರನ್, ದಿಲೀಪ್ ಕುಮಾರ್ ಸೇರಿದಂತೆ ವಿವಿಧ ಭಾಷೆಗಳ ಜನಪ್ರಿಯ ನಟರೊಂದಿಗೆ ನಟಿಸಿದ್ದಾರೆ.

ಅಮೋಘ ಅಭಿನಯ ಕೌಶಲದಿಂದ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದಲ್ಲಿನ ಅವರ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದುಗೌರವ ಕಾರ್ಯದರ್ಶಿನೇ.ಭ.ರಾಮಲಿಂಗಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.