ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ನಾಗಡಿಕೆರೆ ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ’ಗೆ ‘ವಿಜಯ ಕರ್ನಾಟಕ’ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಆಯ್ಕೆಯಾಗಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದ ಸಮಿತಿಯು ಗುರುವಾರ ಈ ಆಯ್ಕೆ ನಡೆಸಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.
ಕನ್ನಡ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕಳೆದ 11 ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 30 ರಂದು ನಡೆಯಲಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.