
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 2024ನೇ ಸಾಲಿನ 52 ವಿವಿಧ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದೆ.
2024ರ ಜ.1ರಿಂದ ಡಿ.31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು, ಪ್ರಕಾಶಕರಿಂದ 54 ದತ್ತಿ ಪ್ರಶಸ್ತಿಗೆ ಆಹ್ವಾನಿಸಲಾಗಿತ್ತು. ಈ ಪ್ರಶಸ್ತಿಗಳಿಗೆ 900 ಕೃತಿಗಳು ಬಂದಿದ್ದವು. ಸಾಹಿತಿ ಕೆ. ಮರುಳಸಿದ್ದಪ್ಪ ಅವರ ಅಧ್ಯಕ್ಷತೆಯ ಸಮಿತಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ಆಯ್ಕೆ ಮಾಡಿದೆ.
‘ಪಿ.ಶಾಂತಿಲಾಲ್ ದತ್ತಿ ಪ್ರಶಸ್ತಿ’ ಮತ್ತು ‘ಅಸುಂಡಿ ಹುದ್ದಾರ್ ಕೃಷ್ಣರಾವ್ ದತ್ತಿ ಪ್ರಶಸ್ತಿ’ಗೆ ಯಾವುದೇ ಪುಸ್ತಕಗಳು ಬಂದಿರಲಿಲ್ಲ ಎಂದು ಆಡಳಿತಾಧಿಕಾರಿ ಕೆ.ಎಂ.ಗಾಯಿತ್ರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.