ADVERTISEMENT

ಕನ್ನಡ ಶಾಲೆ: ಭೈರಪ್ಪ ಅಧ್ಯಕ್ಷತೆಯಲ್ಲಿ ಸಭೆ 5ಕ್ಕೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 20:23 IST
Last Updated 1 ಏಪ್ರಿಲ್ 2022, 20:23 IST
ಎಸ್.ಎಲ್. ಭೈರಪ್ಪ
ಎಸ್.ಎಲ್. ಭೈರಪ್ಪ   

ಬೆಂಗಳೂರು:ಕನ್ನಡ ಶಾಲೆ ಉಳಿಸಿ, ಬೆಳೆಸುವ ಬಗ್ಗೆಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಸಾಹಿತಿ ಎಸ್.ಎಲ್. ಭೈರಪ್ಪ ಅವರ ಅಧ್ಯಕ್ಷತೆಯಲ್ಲಿ ಇದೇ 5ರ ಬೆಳಿಗ್ಗೆ 11 ಗಂಟೆಗೆ ದುಂಡು ಮೇಜಿನ ಸಭೆ ಹಮ್ಮಿಕೊಂಡಿದೆ.

ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸಭೆ ಉದ್ಘಾಟಿಸಲಿದ್ದಾರೆ.ವೀರಭದ್ರ ಚನ್ನಮಲ್ಲ ಸ್ವಾಮೀಜಿ ಹಾಗೂ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹೈಕೋರ್ಟ್ವಿಶ್ರಾಂತ ನ್ಯಾಯಮೂರ್ತಿಗಳಾದ ಎನ್. ಕುಮಾರ್ ಹಾಗೂ ನಾಗಮೋಹನ್ ದಾಸ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ವಿದ್ವಾಂಸ ಪ್ರಧಾನ ಗುರುದತ್ತ ಅವರು ವಿಶೇಷ ಮುಖ್ಯ ಅತಿಥಿಗಳಾಗಿ ಭಾಗ ಡವಹಿಸಲಿದ್ದಾರೆ.

ಶಿಕ್ಷಣ ತಜ್ಞರು, ಸಾಹಿತಿಗಳು, ನ್ಯಾಯಮೂರ್ತಿಗಳು, ಚಿಂತಕರು, ಕನ್ನಡ ಪರ ಹೋರಾಟಗಾರರು ಒಳಗೊಂಡಂತೆ 27 ಮಂದಿ ಸಭೆಯಲ್ಲಿ ಭಾಗವಹಿಸ ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.