ಮದನ ಗೌಡ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ನೂತನ ಗೌರವ ಕಾರ್ಯದರ್ಶಿಯಾಗಿ ಪತ್ರಕರ್ತ ಎಚ್.ಬಿ.ಮದನ ಗೌಡ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ಅವರು ಗುರುವಾರ ಇಲ್ಲಿ ಆದೇಶ ಪ್ರತಿ ಹಸ್ತಾಂತರಿಸಿದರು. ಗೌರವ ಕಾರ್ಯದರ್ಶಿ ಹುದ್ದೆಗೆ ಪದ್ಮಿನಿ ನಾಗರಾಜು ಹಾಗೂ ನೇ.ಭ. ರಾಮಲಿಂಗ ಶೆಟ್ಟಿ ಅವರು ಜೂನ್‌ನಲ್ಲಿ ರಾಜೀನಾಮೆ ನೀಡಿದ್ದರು. ಇದರಿಂದಾಗಿ ಗೌರವ ಕೋಶಾಧ್ಯಕ್ಷ ಹುದ್ದೆಯಲ್ಲಿದ್ದ ಬಿ.ಎಂ.ಪಟೇಲ್ ಪಾಂಡು ಅವರನ್ನು ಗೌರವ ಕಾರ್ಯದರ್ಶಿ ಹುದ್ದೆಗೆ ನಾಮನಿರ್ದೇಶನ ಮಾಡಲಾಗಿತ್ತು. ಖಾಲಿಯಿದ್ದ ಇನ್ನೊಂದು ಹುದ್ದೆಗೆ ಹಾಸನದ ಮದನ ಗೌಡ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
‘ಮದನ ಗೌಡ ಅವರು ಮೂರು ದಶಕಗಳಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಕನ್ನಡ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ್ದಾರೆ. ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದರು. ಹಾಸನದ ‘ಜನಮಿತ್ರ’ ಪತ್ರಿಕೆಯ ಪ್ರಧಾನ ಸಂಪಾದಕರಾಗಿದ್ದಾರೆ’ ಎಂದು ಕಸಾಪ ಮಾಧ್ಯಮ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.