ಮಹೇಶ್ ಜೋಶಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಮತ್ತು ಸವಲತ್ತುಗಳನ್ನು ರಾಜ್ಯ ಸರ್ಕಾರವು ತಕ್ಷಣದಿಂದಲೇ ಜಾರಿಯಾಗುವಂತೆ ಹಿಂದಕ್ಕೆ ಪಡೆದಿದೆ.
ಮಹೇಶ್ ಜೋಶಿ ಅವರ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಕೆಲ ಸಾಹಿತಿಗಳು ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.
ಸಾಹಿತ್ಯ ಪರಿಷತ್ತಿನ ಸ್ಥಾನದಿಂದ ಅವರನ್ನು ಇಳಿಸಬೇಕು ಎಂದು ಕೋರಿದ್ದರು. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವು ಈ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.